ಮಂಗಳೂರು: ಕೇಂದ್ರ ಸರಕಾರದ ಬಹುನಿರೀಕ್ಷಿತ, ದೂರದೃಷ್ಟಿಯುಳ್ಳ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಮಂಗಳೂರಿನಲ್ಲಿ ಸ್ಥಾಪಿಸಲು ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿರುವುದಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಅನುಮೋದನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಿಎಂ ಯಡಿಯೂರಪ್ಪನವರಿಗೆ ಧನ್ಯವಾದ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿ ಗಂಜಿಮಠ ಪರಿಸರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಅನುಷ್ಠಾನಗೊಳ್ಳಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೂ ಕಾರಣವಾಗಲಿದೆ. ಈ ಯೋಜನೆಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಹುಕಾಲದ ಪ್ರಯತ್ನ ಹಾಗೂ ಸಂವಹನ ಯಶಸ್ವಿಯಾಗಿದೆ.
Kshetra Samachara
22/01/2021 08:43 pm