ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಜೆ ಅಣೆಕಟ್ಟಿನಲ್ಲಿ ಸಾಕಷ್ಟು ನೀರಿದ್ದರೂ ಬೈಲೂರು ವಾರ್ಡ್ ನಲ್ಲಿ ನೀರಿಲ್ಲ!; ಜನತೆ ಹೈರಾಣ

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಬೈಲೂರು 31ನೇ ವಾರ್ಡ್ ನಿವಾಸಿಗಳು ಪೌರಾಯುಕ್ತ ಉದಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಉಡುಪಿ ನಗರಸಭೆ ವ್ಯಾಪ್ತಿಯ ಬೈಲೂರು ವಾರ್ಡಿನ ನಾಗರಿಕರು ಕಳೆದ ಒಂದು ವರ್ಷದಿಂದಲೂ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಬಜೆ ಅಣೆಕಟ್ಟಿನಲ್ಲಿ ಸಾಕಷ್ಟು ನೀರಿದ್ದರೂ ಬೈಲೂರು ವಾರ್ಡಿನಲ್ಲಿ ನೀರಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಿಗೆ ಎಷ್ಟೇ ಗಮನಕ್ಕೆ‌ ತಂದರೂ ಪ್ರಯೋಜನವಾಗಿಲ್ಲ. ಕಳೆದ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ಇನ್ನಷ್ಟು ಹೆಚ್ಚಾಗಿದೆ.‌ ಬಾವಿಯಿಂದ ಪ್ರತೀ‌ ದಿನ ನೀರು ತರುವುದು ಕಷ್ಟಕರವಾಗಿರೋದರಿಂದ‌ ಈ ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ವಾರ್ಡ್ ನಗರಸಭೆ ಸದಸ್ಯ ರಮೇಶ್ ಕಾಂಚನ್ ಜೊತೆಗೆ ನಗರಸಭೆಗೆ ತೆರಳಿದ ನಾಗರಿಕರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಈ ಮನವಿಗೆ ಸ್ಪಂದಿಸಿದ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಈ‌ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ‌ನೀಡಿದರು.

Edited By : Nagesh Gaonkar
Kshetra Samachara

Kshetra Samachara

29/01/2021 05:22 pm

Cinque Terre

19.2 K

Cinque Terre

0