ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ಸಂಪೂರ್ಣ ವಿನಾಯಿತಿ ನೀಡಿ; ನಾಗರಿಕ ಕ್ರಿಯಾ ಸಮಿತಿ

ಪಡುಬಿದ್ರಿ: ಈ ತನಕ ಸ್ಥಳೀಯರಿಗೆ ದೊರೆಯುತ್ತಿದ್ದ ವಿನಾಯಿತಿ ರದ್ದುಗೊಳ್ಳುವ ಹಿನ್ನೆಲೆಯಲ್ಲಿ ಇಂದು ಹೆಜಮಾಡಿ ನಾಗರಿಕರ ಕ್ರಿಯಾ ಸಮಿತಿಯು ಕಾಪು ತಾಲೂಕಿನ ಹೆಜಮಾಡಿ ಟೋಲ್‌ಗೆ ಮೆರವಣಿಗೆ ಮೂಲಕ ತೆರಳಿ ಸಂಪೂರ್ಣ ವಿನಾಯಿತಿಗೆ ಹಾಗೂ ಈ ಹಿಂದೆ ಗ್ರಾಮಸ್ಥರಿಗೆ ನೀಡಿದ ಆಶ್ವಾಸನೆಗಳನ್ನು ಪೂರೈಸುವಂತೆ ಮನವಿ ನೀಡಲಾಯಿತು.

ಹೆಜಮಾಡಿಯಲ್ಲಿ ಟೋಲ್ ನಿರ್ಮಾಣ ಸಂದರ್ಭ ಕ್ರಿಯಾ ಸಮಿತಿಯು ಟೋಲ್‌ನಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ, ಉದ್ಯೋಗವಕಾಶ, ಕನ್ನಂಗಾರು ಬಳಿ ಸರ್ವಿಸ್ ರಸ್ತೆ, ದಾರಿದೀಪ ಮತ್ತು ಚರಂಡಿ ವ್ಯವಸ್ಥೆ, ಬಸ್ಸು ತಂಗುದಾಣ ನಿರ್ಮಾಣ ಸಹಿತ ವಿವಿಧ ಬೇಡಿಕೆಗಳನ್ನು ಸಲ್ಲಿಸಿತ್ತು.‌ ಆ ಸಂದರ್ಭ ಟೋಲ್ ಕಂಪನಿ ನವಯುಗ್ ಎಲ್ಲ ಬೇಡಿಕೆಗಳನ್ನು ಶೀಘ್ರ ಈಡೇರಿಸುವ ಭರವಸೆ ನೀಡಿತ್ತು. ಆದರೆ, ಮುಖ್ಯ ಬೇಡಿಕೆಗಳನ್ನು ಈವರೆಗೂ ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗ್ರಾಮಸ್ಥರು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಹೆಜಮಾಡಿ ಟೋಲ್‌ಗೇಟ್‌ಗೆ ತೆರಳಿ ಮನವಿ ಸಲ್ಲಿಸಿದ್ದು, 15 ದಿನದೊಳಗೆ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ ಮತ್ತೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.

ಕ್ರಿಯಾ ಸಮಿತಿಯ ಕಾರ್ಯದರ್ಶಿ ಸನಾ ಇಬ್ರಾಹಿಮ್, ಸದಸ್ಯರಾದ ಶೇಖಬ್ಬ ಕೋಟೆ, ರೋಲ್ಫಿ ಡಿಕೋಸ್ತಾ, ಪ್ರಾಣೇಶ್ ಹೆಜ್ಮಾಡಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

10/02/2021 08:57 pm

Cinque Terre

18.65 K

Cinque Terre

0

ಸಂಬಂಧಿತ ಸುದ್ದಿ