ಉಡುಪಿ ವಿಧಾನಸಭಾ ಕ್ಷೇತ್ರದ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಾಯಿ ಬೆಟ್ಟು ಬಳಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ರೂ. 35.00 ಕೋಟಿ ಮಂಜೂರಾಗಿರುತ್ತದೆ. ಕಿಂಡಿ ಅಣೆಕಟ್ಟಿನ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ವಿವರಿಸಿದರು.
ಬಳಿಕ ಉಪಸ್ಥಿತರಿದ್ದ ಜನಪ್ರತಿನಿಧಿಗಳು, ಸ್ಥಳೀಯರು, ಗ್ರಾಮಸ್ಥರು ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು. ಶಾಸಕರು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
Kshetra Samachara
16/02/2021 12:57 pm