ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬೆಲೆ ಏರಿಕೆ ವಿರುದ್ಧ ಜಿಲ್ಲಾ ನಾಗರಿಕ ಸಮಿತಿ ವಿಶಿಷ್ಟ ಪ್ರತಿಭಟನೆ; ಅಣಕು ಶವ ಯಾತ್ರೆ

ಉಡುಪಿ: ತೈಲ, ಅಡುಗೆ ಅನಿಲ, ಆಹಾರ ಸಾಮಗ್ರಿ ಸಹಿತ ನಾನಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್, ಸರಕಾರದ ಗಮನ ಸೆಳೆಯಲು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು.

ಅಜ್ಜರಕಾಡು ಹುತಾತ್ಮರ ಸೈನಿಕರ ಸ್ಮಾರಕದ ಬಳಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಜೋಡುಕಟ್ಟೆಯಿಂದ ಪ್ರತಿಭಟನೆ ಮೆರವಣಿಗೆ ಸಾಗಿ ಬಂದು ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಸಮಾಪನಗೊಂಡಿತು.

ಈ ಸಂದರ್ಭ ಅಣಕು ಶವಯಾತ್ರೆಯೂ ನಡೆಯಿತು. ಬೆಲೆ ಏರಿಕೆ ವಿರುದ್ಧ ಪ್ರತಿಭಟನಕಾರರು ಬಗೆಬಗೆಯ ಭಿತ್ರಿಪತ್ರಗಳನ್ನು ಪ್ರದರ್ಶಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಗಮನ ಸೆಳೆದರು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಈ ವಿಶಿಷ್ಟ ಪ್ರತಿಭಟನೆಯನ್ನು ಆಯೋಜಿಸಿದ್ದರು.

Edited By : Manjunath H D
Kshetra Samachara

Kshetra Samachara

25/02/2021 12:23 pm

Cinque Terre

16.92 K

Cinque Terre

9

ಸಂಬಂಧಿತ ಸುದ್ದಿ