ಮಂಗಳೂರು: ಮಂಗಳೂರಿನ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂ ಮತ್ತು ಸರೋಶ್ ಮೆಮೋರಿಯಲ್ ಈಜುಕೊಳದ ಲೋಕಾರ್ಪಣೆ ಶನಿವಾರ ನಡೆಯಿತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಡಿಟೋರಿಯಂ ಉದ್ಘಾಟಿಸಿದರು. ನಿವೃತ್ತ ಐಜಿಪಿ ಹಾಗೂ ರಾಜ್ಯ ಈಜು ಸಂಸ್ಥೆ ಅಧ್ಯಕ್ಷ ಗೋಪಾಲ್ ಹೊಸೂರು ಈಜುಕೊಳ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾಂಕ್‌ನ ಸಿಇಒ ಹಾಗೂ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ ಕಾಮತ್, ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕೆ. ಸಿ. ನಾಯ್ಕ್, ಶಕ್ತಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಸಂಜಿತ್ ನಾಯ್ಕ್ ,ವಿದ್ಯಾಭಾರತಿ ಕ್ಷೇತ್ರೀಯ ಸಂಘಟನೆ ಕಾರ್ಯದರ್ಶಿ ಜಿ.ಆರ್. ಜಗದೀಶ್, ಸ್ಥಳೀಯ ಕಾರ್ಪೊರೇಟರ್ ವನಿತಾ ಪ್ರಸಾದ್, ಶಕ್ತಿ ಕಾಲೇಜಿನ ಸಲಹೆಗಾರ ರಮೇಶ್ ಕೆ. ಮತ್ತಿತರರು ಉಪಸ್ಥಿತರಿದ್ದರು.
Kshetra Samachara
27/02/2021 04:28 pm