ಕೊಂಕಣ ರೈಲ್ವೆ ಮಾರ್ಗ ಯಥಾಸ್ಥಿತಿಗೆ: ಸಂಚಾರ ಸುಗಮ

ಉಡುಪಿ: ಮಹಾರಾಷ್ಟ್ರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸ್ಥಗಿತಗೊಂಡಿದ್ದ ಕೊಂಕಣ ರೈಲು ಮಾರ್ಗದ ರೈಲುಗಳ ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ರತ್ನಗಿರಿ ಜಿಲ್ಲೆಯ ಚಿಪ್ಳುಣ್ ಹಾಗೂ ಕಮತೆ ನಿಲ್ದಾಣಗಳ ನಡುವೆ ಹರಿಯುವ ವಶಿಷ್ಠಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇದೀಗ ನದಿ ಹರಿವು ಸಾಮಾನ್ಯ ಸ್ಥಿತಿಗೆ ಬಂದಿದ್ದು ಇಂದು ಮುಂಜಾನೆ 3:45ಕ್ಕೆ ಮಾರ್ಗ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ತಾಂತ್ರಿಕ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ಪುನರಾರಂಭಗೊಂಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Kshetra Samachara

Kshetra Samachara

2 months ago

Cinque Terre

2.57 K

Cinque Terre

0