ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿ ಬದಿಯ ಅಪಾಯಕಾರಿ ಮರಗಳ ತೆರವಿಗೆ ಆಗ್ರಹ

ಮುಲ್ಕಿ: ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ, ಕುಬೆವೂರು, ಕೆಂಚನಕೆರೆ, ಅಂಗರಗುಡ್ಡೆ, ಕೆರೆಕಾಡು, ಹೊಸಕಾವೇರಿ, ಬಟ್ಟಕೋಡಿ ಬಳಿ ಅಪಾಯಕಾರಿ ಮರಗಳಿದ್ದು ತೆರವುಗೊಳಿಸುವಂತೆ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಆಗ್ರಹಿಸಿದ್ದಾರೆ.

ಮುಲ್ಕಿ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಮರಗಳು ಬೀಳುವ ಸ್ಥಿತಿಯಲ್ಲಿದ್ದು ಈಗಲೋ ಆಗಲೋ ಎನ್ನುವಂತಿದೆ.

ಕೆಲ ಮರಗಳು ಒಣಗಿದ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿದೆ.

ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿ ಸಾವಿರಾರು ವಾಹನಗಳು ಸಂಚರಿಸುವ ರಸ್ತೆಯಾಗಿದ್ದು ಭಾರಿ ಮಳೆ ಗಾಳಿಗೆ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಬಗ್ಗೆ ಅನೇಕ ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಇದುವರೆಗೂ ತೆರವುಗೊಂಡಿಲ್ಲ ಹಾಗೂ ರಾಜ್ಯ ಹೆದ್ದಾರಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಹೆದ್ದಾರಿಯಲ್ಲಿ ನೀರು ಹರಿಯುತ್ತಿದ್ದು ಡಾಮರು ನಾಶವಾಗುವ ಭೀತಿ ಇದೆ.

ಕೂಡಲೇ ಲೋಕೋಪಯೋಗಿ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು ಎಂದು ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

28/07/2021 05:41 pm

Cinque Terre

8.48 K

Cinque Terre

0

ಸಂಬಂಧಿತ ಸುದ್ದಿ