ಮಂಗಳೂರು: ಇತ್ತೀಚೆಗೆ ಕುಸಿದಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಜು.30ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ.
ತಜ್ಞರ ಉಪಸ್ಥಿತಿಯಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿರುವುದೇ ಎಂದು ಇಂದು ಪರೀಕ್ಷಿಸಿದ್ದಾರೆ. ಪರೀಕ್ಷೆ ಯಶಸ್ವಿಯಾಗಿದ್ದು, ನಾಳೆ ಮಧ್ಯಾಹ್ನದ ಬಳಿಕ ಮರವೂರು ಸೇತುವೆ ಮೇಲಿನಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ತಜ್ಞ ಇಂಜಿನಿಯರ್ಗಳ ಸಲಹೆಯಂತೆ ಕೆಲ ದಿನಗಳ ಹಿಂದೆಯೇ ಸೇತುವೆಯ ಪಿಲ್ಲರ್ನ್ನು ಮೇಲಕ್ಕೆ ಎತ್ತಿ ಯಥಾಸ್ಥಿತಿಗೆ ತರಲಾಗಿತ್ತು. ನಂತರ ವಾಹನ ಸಂಚಾರ ಸುಲಭವಾಗಲೆಂದು ಕೆಲವು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಯಿತು. ಇದೀಗ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು ಒಂದೂವರೆ ತಿಂಗಳ ಬಳಿಕ ಸೇತುವೆ ಮತ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.
Kshetra Samachara
29/07/2021 10:08 pm