ಮಂಗಳೂರು: ನಗರದ ಹೊರವಲಯದ ಮಳವೂರು ಗ್ರಾಮ ಪಂಚಾಯತ್ ಕಚೇರಿಯ ಬಳಿ ಜಲಜೀವನ್ ಮಿಷನ್ ಯೋಜನೆ ಅನುದಾನದ 1 ಕೋಟಿ 72 ಲಕ್ಷ ಮೊತ್ತದಲ್ಲಿ (1 ಲಕ್ಷ ಲೀಟರ್) ಹಾಗೂ ಕೆಂಜಾರು ಸರಕಾರಿ ಪ್ರಾಥಮಿಕ ಶಾಲೆ ಬಳಿ (50 ಸಾವಿರ ಲೀಟರ್) ಸಾಮರ್ಥ್ಯದ 2 ನೀರಿನ ಓವರ್ ಹೆಡ್ ಟ್ಯಾಂಕ್‌ಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಸರಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದರು. ಈ ವೇಳೆ ಮಾಜಿ ತಾಲೂಕು ಪಂಚಾಯತಿ ಸದಸ್ಯೆ ಸುಪ್ರಿತಾ ಶೆಟ್ಟಿ, ಗ್ರಾ ಪಂ. ಮಾಜಿ ಅಧ್ಯಕ್ಷ ಗಣೇಶ ಅರ್ಬಿ, ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪೂರ್ಣಕಲ, ಜಿಲ್ಲಾ ಪಂಚಾಯತ್ ಕಿರಿಯ ಅಭಿಯಂತರರಾದ ಪ್ರದೀಪ್ ಎಸ್ ಆರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
30/07/2021 01:47 pm