ಮುಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಕಾಡು ಕೆನರಾ ಲೈಟಿಂಗ್ ಹಿಂಬದಿಯ ಗ್ರೆಟ್ಟಾ ಎಂಬವರ ಮನೆಯ ಪಕ್ಕದ ರಸ್ತೆಯಲ್ಲಿ ವಿದ್ಯುತ್ ಕಂಬ ವಾಲಿ ನಿಂತಿದ್ದು ತೆರವುಗೊಳಿಸಬೇಕು ಎಂದು ಮೆಸ್ಕಾಂ ಇಲಾಖೆಯನ್ನು ಆಗ್ರಹಿಸಿದ್ದಾರೆ.
ವಿದ್ಯುತ್ ಕಂಬದಿಂದ ಸುಮಾರು ಐದು ಮನೆಗಳಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದು ಕಂಬಕ್ಕೆ ರಕ್ಷಣೆ ಇಲ್ಲದೆ ಕಾಂಕ್ರೀಟ್ ರಸ್ತೆ ಬಳಿ ವಾಲಿ ನಿಂತಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಸ್ಥಳೀಯರಾದ ಗ್ರೆಟ್ಟಾ ಆತಂಕ ವ್ಯಕ್ತಪಡಿಸಿದ್ದು ಅನಾಹುತ ಸಂಭವಿಸುವ ಮೊದಲೇ ಮೆಸ್ಕಾಂ ಇಲಾಖೆ ವಿದ್ಯುತ್ ಕಂಬವನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.
ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಬಗ್ಗೆ ಮುಲ್ಕಿ ಮೆಸ್ಕಾಂ ಸೆಕ್ಷನ್ ಆಫೀಸರ್ ಹಾಗೂ ಕಿನ್ನಿಗೋಳಿ ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಎರಡು ದಿನಗಳಲ್ಲಿ ವಿದ್ಯುತ್ ಕಂಬವನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದಾರೆ ಎಂದು ಗೋಪಿನಾಥ ಪಡಂಗ ತಿಳಿಸಿದ್ದಾರೆ.
Kshetra Samachara
30/07/2021 02:54 pm