ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಶಾ ಮುಕ್ತ ಭಾರತ ಅಭಿಯಾನ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಂದು ನಶಾ ಮುಕ್ತ ಭಾರತ ಅಭಿಯಾನ ಉದ್ಘಾಟನೆಗೊಂಡಿತು.ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾದ "ನಶಾ ಮುಕ್ತ ಭಾರತ ಅಭಿಯಾನ ಉಡುಪಿ ಜಿಲ್ಲೆ" ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ ರಘುಪತಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಾಳಿಗಾ ಆಸ್ಪತ್ರೆ ಮನಶಾಸ್ತ್ರಜ್ಞರಾದ ಪಿ.ವಿ ಭಂಡಾರಿ, ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ಜಿಲ್ಲಾ ವಿಕಲಚೇತನ ಸಬಲೀಕರಣ ಅಧಿಕಾರಿಗಳಾದ ಶ್ರೀಮತಿ ರತ್ನಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀಮತಿ ಶರ್ಮಿಳಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

03/08/2021 12:08 pm

Cinque Terre

6.72 K

Cinque Terre

2

ಸಂಬಂಧಿತ ಸುದ್ದಿ