ಉಡುಪಿ: ಉಡುಪಿ ವಿಧಾನಸಭೆ ಕ್ಷೇತ್ರದ ಎ.ಪಿ.ಎಂ.ಸಿ ಯಾರ್ಡ್ ನಿಂದ ಕೊಡಂಕೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ರೂ. 5 ಕೋಟಿ ಮಂಜೂರಾಗಿದೆ. ಈ ಸಂಬಂಧ ಇಂದು ಶಾಸಕ ಕೆ ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಸ್ತೆ ಅಭಿವೃದ್ಧಿಯ ಬಗ್ಗೆ ಜಾಗದ ಮಾಲಕರೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಸಂಪಾವತಿ ಮಾಜಿ ನಗರಸಭಾ ಸದಸ್ಯರಾದ ಹರೀಶ್ ರಾಮ್ ಬನ್ನಂಜೆ, ಮೂಡುಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಕೊಡಂಕೂರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
03/08/2021 06:05 pm