ಮುಲ್ಕಿ: ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಸ್ಸುನಿಲ್ದಾಣದ ಬಳಿ ಕಳೆದ ಒಂದು ವಾರದಿಂದ ಆಧಾನಿ ಗ್ಯಾಸ್ ಪೈಪ್ ಲೈನ್ ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದು ಪ್ರಯಾಣಿಕರು ಹಾಗೂ ಅಂಗಡಿ ಮಾಲೀಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಪೈಪ್ ಲೈನ್ ಕಾಮಗಾರಿ ಪ್ರಾರಂಭವಾಗುವಾಗ ಮುಲ್ಕಿ ಬಸ್ ನಿಲ್ದಾಣದ ಬಳಿಯ ಲಲಿತ್ ಮಹಲ್ ಕಟ್ಟಡದ ಎದುರಿನ ಭಾಗಕ್ಕೆ ಹಾನಿಯಾಗಿದ್ದು ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸ್ಥಳೀಯರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡು ಕಾಮಗಾರಿ ಸ್ಥಗಿತಗೊಂಡಿತ್ತು.
ಬಳಿಕ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಹಾಗೂ ಪೈಪ್ ಲೈನ್ ಕಾಮಗಾರಿ ಗುತ್ತಿಗೆದಾರ ಹಾಗೂ ಕಟ್ಟಡ ಮಾಲೀಕರ ಜೊತೆ ಮಾತುಕತೆ ನಡೆಸಿ ಕಾಮಗಾರಿ ಪುನರಾರಂಭಗೊಂಡಿತ್ತು. ಅದರಂತೆ ಭಾನುವಾರ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಬಸ್ ನಿಲ್ದಾಣದ ಮೆಡಿಕಲ್ ಅಂಗಡಿ ಬಳಿಯಲ್ಲಿದ್ದ ಕೊಳವೆಬಾವಿಗೆ ಹಾನಿಯಾಗಿದೆ ಎಂದು ಅಂಗಡಿ ಮಾಲೀಕರು ದೂರಿದ್ದಾರೆ.
ಬಿರುವೆರ್ ಕುಡ್ಲ ಸಂಘಟನೆಯ ಕಿಶೋರ್ ಮಾತನಾಡಿ ಅವೈಜ್ಞಾನಿಕ ಪೈಪ್ ಲೈನ್ ಕಾಮಗಾರಿಯಿಂದ ಮುಲ್ಕಿ ಜನತೆ ಹೈರಾಣಾಗಿದ್ದು ಕೂಡಲೇ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದ್ದಾರೆ.
Kshetra Samachara
08/08/2021 10:04 pm