ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ದುರ್ವಾಸನೆ, ವಿಲೇವಾರಿ ಮುಗಿಯದ ಗೋಳು,

ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ, ಇಂದ್ರನಗರ ಅಣೆಕಟ್ಟು ಬಳಿಗೆ ಹೋಗುವ ರಸ್ತೆಯ ಬದಿಯಲ್ಲಿ ಹಾಗೂ ಸಾಗ್ ಬಳಿ ಲೋಡುಗಟ್ಟಲೆ ದುಷ್ಕರ್ಮಿಗಳು ಎಸೆದ ತ್ಯಾಜ್ಯ ರಸ್ತೆಯನ್ನು ನುಂಗುತ್ತಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ತ್ಯಾಜ್ಯ ವಿಲೇವಾರಿಯಾಗದೆ ಇರುವುದು ನಾಗರಿಕರ ಆಕ್ರೋಶ ಪಂಚಾಯಿತಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಬಗ್ಗೆ ಅನೇಕ ಬಾರಿ ಹಳೆಯಂಗಡಿ ಪಂಚಾಯಿತಿಗೆ ಸಾರ್ವಜನಿಕರು, ಪಂಚಾಯತ್ ಸದಸ್ಯರು ದೂರು ನೀಡಿದರೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಇಂದು ಹಳೆಯಂಗಡಿ ಗ್ರಾಪಂ ಸದಸ್ಯರಾದ ಅಬ್ದುಲ್ ಅಜೀಜ್ ಮತ್ತು ಅಬ್ದುಲ್ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆಯಂಗಡಿ ಗ್ರಾಪಂ ಸದಸ್ಯ ಅಬ್ದುಲ್ ಅಜೀಜ್ ಮಾಧ್ಯಮದೊಂದಿಗೆ ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಗೆ ಲಕ್ಷಾಂತರ ರೂ ವೆಚ್ಚದಲ್ಲಿ ನೂತನ ಘಟಕ ನಿರ್ಮಾಣವಾಗಿದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನೂತನ ತ್ಯಾಜ್ಯ ವಿಲೇವಾರಿ ಘಟಕ ತುಕ್ಕು ಹಿಡಿಯುತ್ತಿದ್ದರೆ ಇತ್ತ ಹಳೆಯಂಗಡಿ ಗ್ರಾ ಪಂ ಅಧಿಕಾರಿಗಳು ತ್ಯಾಜ್ಯ ವಿಲೇವಾರಿ ವಾಹನಕ್ಕೆ ಬಕಪಕ್ಷಿಯಂತೆ ಕಾಯುತ್ತಿದ್ದಾರೆ, ಎಂದು ವ್ಯಂಗ್ಯವಾಡಿದ್ದಾರೆ.

ಕೇಂದ್ರದಲ್ಲಿ, ರಾಜ್ಯದಲ್ಲಿ, ಕ್ಷೇತ್ರದಲ್ಲಿ, ಪಂಚಾಯಿತಿಯಲ್ಲಿ ಒಂದೇ ಪಕ್ಷ ಆಡಳಿತದಲ್ಲಿದ್ದರೂ ಪಂಚಾಯತ್ ಅಭಿವೃದ್ಧಿಗೆ, ತ್ಯಾಜ್ಯ ವಿಲೇವಾರಿಗೆ ಅನುದಾನ ಯಾಕೆ ಬಿಡುಗಡೆಯಾಗುತ್ತಿಲ್ಲ? ಅಂದು ವಿರೋಧ ಪಕ್ಷದಲ್ಲಿದ್ದಾಗ ಬೊಬ್ಬೆ ಹಾಕುತ್ತಿದ್ದವರು ಈಗ ಮೌನವಾಗಿದ್ದಾರೆ.

ತ್ಯಾಜ್ಯ ವಿಲೇವಾರಿಯಂತಹ ಸಮಸ್ಯೆಗಳನ್ನು ನಿಭಾಯಿಸಲು ತಾಕತ್ತಿಲ್ಲದಿದ್ದರೆ ರಾಜಿನಾಮೆ ನೀಡಲಿ ಎಂದು ಅವರು ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

09/08/2021 04:11 pm

Cinque Terre

14.02 K

Cinque Terre

1

ಸಂಬಂಧಿತ ಸುದ್ದಿ