ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ಬಿಡುಗಡೆ

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ಬಾಕಿ ಇರುವ ವೇತನ ಪಾವತಿಸುವ ಸಲುವಾಗಿ ಶಾಸಕ ಕೆ. ರಘುಪತಿ ಭಟ್ ರವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಕೆ. ಸುಧಾಕರ್ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಜತೆ ಸಭೆ ನಡೆಸಿದ್ದರು. ಇದರ ಫಲವಾಗಿ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ರೂ. 50.00 ಲಕ್ಷ ಬಿಡುಗಡೆಗೊಳಿಸಲಾಗಿದೆ.

ಇಂದು ಜಿಲ್ಲಾಸ್ಪತ್ರೆಯಲ್ಲಿ ಶಾಸಕ ಕೆ. ರಘುಪತಿ ಭಟ್ ರವರ ಸಮ್ಮುಖದಲ್ಲಿ ಅವರ ಸೂಚನೆಯಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸುವ ನಿರ್ಬಂಧದೊಂದಿಗೆ ಅಧಿಕಾರಿಗಳಿಗೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾll ಮಧುಸೂದನ್ ನಾಯಕ್ 50 ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ತಕ್ಷಣದಲ್ಲಿ ವೇತನ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾll ಚಂದ್ರಶೇಖರ್ ಅಡಿಗ ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/08/2021 06:46 pm

Cinque Terre

5.76 K

Cinque Terre

0

ಸಂಬಂಧಿತ ಸುದ್ದಿ