ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸುಮಾರು 7 ಲಕ್ಷ ರೂ ವೆಚ್ಚದ ವಾಹನವನ್ನು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಪಂಚಾಯತಿಗೆ ಕೀ ಹಸ್ತಾಂತರ ಮಾಡುವ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭ ಅವರು ಮಾತನಾಡಿ ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿದರೆ ಪಂಚಾಯತ್ ಅಭಿವೃದ್ಧಿ ಸಾಧ್ಯ. ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಬಡವರಿಗೆ ಹಕ್ಕು ಪತ್ರ ವಿತರಣೆ ಕಾರ್ಯ ಪ್ರಗತಿಯಲ್ಲಿದ್ದು ಕ್ಷೇತ್ರದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ 10ಕೋಟಿ ಮಂಜೂರಾಗಿದ್ದು, ಸುಮಾರು 4 ಕೋಟಿ ವೆಚ್ಚದ ತಡೆಗೋಡೆ ಕಾರ್ಯ ಅಭಿವೃದ್ಧಿಯಲ್ಲಿ ಇದೆ. ಪಂಚಾಯತ್ ಪೌರ ಕಾರ್ಮಿಕರ ಖಾಯಂ ನೇಮಕಾತಿ ಪರಿಶೀಲನೆಯಲ್ಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಅಶೋಕ್ ಬಂಗೇರಮಾಜೀ ತಾಪಂ ಸದಸ್ಯ ಜೀವನ್ ಪ್ರಕಾಶ್ ತಾಪಂ ಕಾರ್ಯನಿರ್ವಹಣಾಧಿಕಾರಿ ನಾಗರಾಜ್,ಆರ್. ಐ. ದಿನೇಶ್, ಗ್ರಾಪಂ ಸದಸ್ಯರು, ಗ್ರಾಮಕರಣಿಕ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ನಾಯ್ಕ ಸ್ವಾಗತಿಸಿದರು ಕಾರ್ಯದರ್ಶಿ ಶ್ರೀಶೈಲ ಧನ್ಯವಾದ ಅರ್ಪಿಸಿದರು
Kshetra Samachara
17/08/2021 12:20 pm