ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕಿದಿಯೂರು, ಕಪ್ಪೆಟ್ಟು ಭಾಗದಲ್ಲಿ ನಿರ್ಮಿಸಿರುವ ನೂತನ ಅಂಬೇಡ್ಕರ್ ಭವನವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷರಾದ ಸೋಮನಾಥ್ ಬಿ.ಕೆ, ಅಂಬೇಡ್ಕರ್ ಭವನದ ಅಧ್ಯಕ್ಷರಾದ ಮಂಜುನಾಥ್ ಕಪ್ಪೆಟ್ಟು, ದಲಿತ ಮುಖಂಡ ಜಯನ್ ಮಲ್ಪೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್, ಅಂಬಲಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಸಂತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
17/08/2021 01:31 pm