ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು ಸಹಯೋಗದೊಂದಿಗೆ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನತ್ಯಾಜ್ಯ ವಿಲೇವಾರಿಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಾಗಾರ ಹಳೆಯಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಮನೆಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆಯನ್ನು ಕಾಪಾಡುವುದರ ಮೂಲಕ ಹಸಿ ಕಸ ಒಣ ಕಸ ವಿಂಗಡಿಸಿ ತ್ಯಾಜ್ಯ ವಿಲೇವಾರಿ ಮಾಡಲು ಗ್ರಾಮಸ್ಥರು ಪಂಚಾಯತ್ ಜೊತೆ ಸಹಕರಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಪಂ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ಗ್ರಾಪಂ ಉಪಾಧ್ಯಕ್ಷ ಅಶೋಕ್,ಆರ್.ಐ, ದಿನೇಶ್, ವಿ ಎ. ಮೋಹನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ನಾಯ್ಕ, ಕಾರ್ಯದರ್ಶಿ ಶ್ರೀಶೈಲ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಬೆಂಗಳೂರಿನ ಸಾಹಸ್ ಎನ್.ಜಿ. ಒ ಸಂಸ್ಥೆಯ ಸುದೇಶ್ ಕಿಣಿ ತಂಡದಿಂದ ತ್ಯಾಜ್ಯ ಸಂವಹನ ಕಾರ್ಯಾಗಾರ ನಡೆಯಿತು.
Kshetra Samachara
18/08/2021 11:50 am