ಬಜಪೆ: ಪ್ರತಿ ಗ್ರಾಮ ಪಂಚಾಯತ್‌ಗೂ ಘನ ತ್ಯಾಜ್ಯ ವಿಲೇವಾರಿ ಘಟಕದ ಅತಿ ಅಗತ್ಯತೆ ಇದೆ ಎಂದು ಮುಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.
ಪೆರ್ಮುದೆಯ ಕುಂಟಪದವಿನಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಘನ ತ್ರಾಜ್ಯ ವಿಲೇವಾರಿ ಘಟಕಕ್ಕೆ ಶಾಸಕರು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಪ್ರಸಾದ್ .ಎನ್ .ಅಂಚನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೈಲಜಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಲೀನಾ ಡಿ ಸೋಜ ಉಪಸ್ಥಿತರಿದ್ದರು.
Kshetra Samachara
21/08/2021 08:16 pm