ಮುಲ್ಕಿ: ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಿನ್ನಿಗೋಳಿ ಪೇಟೆ ಹಾಗೂ ಕಿನ್ನಿಗೋಳಿ ರಾಜ್ಯ ಹೆದ್ದಾರಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಪಟ್ಟಣ ಪಂಚಾಯತ್ ಮುಂದಾಗಿಡೆ
ಕಿನ್ನಿಗೋಳಿ ಪೇಟೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟುಗೊಳಿಸುವ ಸಲುವಾಗಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಚರ್ಚ್ ನಿಂದ ಭಟ್ರಕೋಡಿ ತನಕ ರಸ್ತೆಯ ಎರಡೂ ಕಡೆ ಸಮತಟ್ಟುಗೊಳಿಸುವ ಕಾರ್ಯವನ್ನು ಪಟ್ಟಣ ಪಂಚಾಯತಿ ಆರಂಭಿಸಿದ್ದು ,ಲೋಕೋಪಯೋಗಿ ಇಲಾಖೆ ಮತ್ತು ಟ್ರಾಫಿಕ್ ಪೊಲೀಸ್ ಸಹಕಾರ ನೀಡುತ್ತಿದ್ದಾರೆ.
ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಿನ್ನಿಗೋಳಿಯ ರೇಷ್ಮಾ ಕಾಂಪ್ಲೆಕ್ಸ್ ಬಳಿ ಮಾಡಿಕೊಡಲಾಗಿದೆ.
ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸಲು ಈಗಾಗಲೇ ಪಟ್ಟಣ ಪಂಚಾಯತ್ ಅಧಿಕಾರಿಗಳು ಗೂಡಂಗಡಿ ಮಾಲೀಕರಿಗೆ ನೋಟೀಸ್ ನೀಡಲಾಗಿದ್ದು ಕೆಲ ಗೂಡಂಗಡಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಳೆದ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದವರನ್ನು ಏಕಾಏಕಿ ತೆರವು ಗಳಿಸಬೇಕೆಂಬ ಪಂಚಾಯತ್ ನಿಲುವಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಆದರೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿ ಚೌಟ ಮಾತನಾಡಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದ್ದಾರೆ.
Kshetra Samachara
27/08/2021 05:48 pm