ಉಡುಪಿ:ಆದರ್ಶ ಆಸ್ಪತ್ರೆ, ಉಡುಪಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಸಹಯೋಗದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ಮತ್ತು ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಂದು ಆದರ್ಶ ಆಸ್ಪತ್ರೆಯಲ್ಲಿ "ಆದರ್ಶ ಶಿಕ್ಷಕ ಪ್ರಶಸ್ತಿ 2021" ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 5 ತಾಲೂಕಿನ 20 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ,ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್. ಎಚ್. ನಾಗೂರ್, ಶಿಕ್ಷಣಾಧಿಕಾರಿ ಜಾನವಿ, ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾll ಚಂದ್ರಶೇಖರ್, ಉಪಾಧ್ಯಕ್ಷರಾದ ವಿಮಲ ಚಂದ್ರಶೇಖರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
07/09/2021 11:39 am