ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಜನನಿಬಿಡ ಕಾಂಪ್ಲೆಕ್ಸ್ ಬಳಿ, ಸರ್ವಿಸ್ ರಸ್ತೆಯ ಪಕ್ಕದ ಪಾದಚಾರಿ ರಸ್ತೆಯ ಮೇಲೆ ಸಾರ್ವಜನಿಕರು ಪ್ಲಾಸ್ಟಿಕ್, ಕೋಳಿ ತ್ಯಾಜ್ಯ, ಹಸಿ ಮತ್ತು ಒಣ ತ್ಯಾಜ್ಯ ಮತ್ತು ಸತ್ತ ಪ್ರಾಣಿಗಳ ಕಳೇಬರಗಳನ್ನು ಎಸೆದು ಹೋಗುತ್ತಿದ್ದಾರೆ.ಇದರ ಪರಿಣಾಮವಾಗಿ ಪರಿಸರದಲ್ಲಿ ಗಬ್ಬು ವಾಸನೆ ಹಬ್ಬಿದ್ದು, ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ ತಾಣವಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಇಲ್ಲಿನ ತ್ಯಾಜ್ಯ ವಿಲೇವಾರಿ ಮಾಡಬೇಕು.ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಬೇಕು ಮತ್ತು ಸಿಸಿಟಿವಿ ವ್ಯವಸ್ಥೆ ಮಾಡಬೇಕು.ಯಾರಾದರೂ ತ್ಯಾಜ್ಯ ಎಸೆಯುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಸಮಿತಿಯ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
Kshetra Samachara
16/09/2021 12:26 pm