ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸ್ವಸಹಾಯ ಗುಂಪುಗಳ ಸಂಜೀವಿನಿ ವಾರದ ಸಂತೆಗೆ ಚಾಲನೆ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಸಂಜೀವಿನಿ ಸ್ವಸಹಾಯ ಗುಂಪುಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಮಾರಾಟಕ್ಕಾಗಿ 'ಸಂಜೀವಿನಿ ವಾರದ ಸಂತೆ 'ಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ .ವೈ .ನವೀನ್ ಭಟ್ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಡ್ರಮ್ ಬಾರಿಸಿ ವಿದ್ಯುಕ್ತ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ,ಸಂಜೀವಿನಿ ಸ್ವಸಹಾಯ ಸಂಘಗಳು ವಿಶೇಷವಾಗಿ ಗ್ರಾಮೀಣ ಮಹಿಳೆಯರು ಹೊಸ ಜೀವನೋಪಾಯ ಕಂಡುಕೊಂಡು ಸಬಲೀಕರಣಗೊಳ್ಳಬೇಕು.ಅದಕ್ಕಾಗಿ ಅವರ ಆಸಕ್ತಿ ಮತ್ತು ಬೇಡಿಕೆಗೆ ಅನುಗುಣವಾಗಿ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು .

ಸುಮಾರು 37 ಕ್ಕೂ ಹೆಚ್ಚು ಸ್ವ ಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತ್ಯೇಕ ವಾರದ ಸಂತೆ ಪ್ರಾರಂಭಿಸುವ ಮೂಲಕ ಜಿಲ್ಲೆಗೆ ಮಾದರಿ ಆಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲೂ ಸಂಜೀವಿನಿ ಸಂತೆ ನಡೆಯಲಿದೆ.

ಅಧ್ಯಕ್ಷತೆಯನ್ನು ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ ತಿಂಗಳಾಯ ,ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ,ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ ಮಾತನಾಡಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಬಾಬು,ಸಹಾಯಕ ಯೋಜನಾಧಿಕಾರಿ ಜೇಮ್ಸ್ ಮತ್ತು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/09/2021 02:40 pm

Cinque Terre

6.5 K

Cinque Terre

1

ಸಂಬಂಧಿತ ಸುದ್ದಿ