ಉಡುಪಿ: ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಅವರು ಈ ಬಾರಿಯ ಪ್ರತಿಷ್ಠಿತ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ ,
ಕೋಟತಟ್ಟು ಗ್ರಾಮ ಪಂಚಾಯತ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇದರ ಸಹಭಾಗಿತ್ವದಲ್ಲಿ ಹಳೆದು ಹದಿನಾರು ವರ್ಷಗಳಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ.
ಶಿವರಾಮ ಕಾರಂತರ ಹುಟ್ಟುಹಬ್ಬವಾದ ಅಕ್ಟೋಬರ್ 10ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ದಕ್ಷಿಣ ಕನ್ನಡ ಮೂಲದ ಗಿರೀಶ್ ಭಾರದ್ವಾಜ್ "ಸೇತುಬಂಧು" ಅಂತ ಪ್ರಸಿದ್ಧಿ ಪಡೆದವರು. ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸುವಂತೆ 130 ತೂಗು ಸೇತುವೆ ನಿರ್ಮಾಣ ಮಾಡಿ, ಸಮಾಜ ಸೇವೆಯಲ್ಲೂ ಕ್ರೀಯಾಶೀಲರಾಗಿ ತೊಡಗಿಕೊಂಡಿದ್ದಾರೆ. ಗಿರೀಶ್ ಭಾರದ್ವಾಜ್ ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ 'ಪದ್ಮಶ್ರೀ' ಪ್ರಶಸ್ತಿ ನೀಡಿ ಗೌರವಿಸಿದೆ.ಈ ಬಾರಿ ಪ್ರತಿಷ್ಟಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಶ್ವಿನಿ ದಿನೇಶ್, ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟತಟ್ಟು , ಪೂರ್ಣಿಮಾ, ವಿಶೇಷ ಕರ್ತವ್ಯಾಧಿಕಾರಿ ಕಾರಂತ ಥೀಮ್ ಪಾರ್ಕ್,ವಾಸು ಪೂಜಾರಿ, ಉಪಾಧ್ಯಕ್ಷರು, ಕೋಟತಟ್ಟು ಗ್ರಾಮ ಪಂಚಾಯತ್ , ಶೈಲಾ ಎಸ್ ಪೂಜಾರಿ, ಪಿ.ಡಿ.ಓ, ಕೋಟತಟ್ಟು ಗ್ರಾಮ ಪಂಚಾಯತ್ ಉಪಸ್ಥಿತರಿದ್ದರು.
Kshetra Samachara
23/09/2021 12:15 pm