ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು, ಕೆಂಚನಕೆರೆ, ಅಂಗರಗುಡ್ಡೆ ಬಳಿ ಸೂಕ್ತ ಚರಂಡಿ ಅವ್ಯವಸ್ಥೆಯಿಂದ ಹೆದ್ದಾರಿಯಲ್ಲಿ ನೀರು ಹರಿಯುತ್ತಿದ್ದು ಅಲ್ಲದೆ ಹೆದ್ದಾರಿ ಬದಿಯಲ್ಲಿ ಹುಲ್ಲು ಗಿಡಗಂಟಿಗಳಿಂದ ಪ್ರಯಾಣಕ್ಕೆ ತೀವ್ರ ತೊಂದರೆಯಾಗಿದೆ ಎಂದು ನಾಗರಿಕರು ಪಂಚಾಯಿತಿಗೆ ದೂರು ನೀಡಿದ್ದರು ಅಲ್ಲದೆ "ಪಬ್ಲಿಕ್ ನೆಕ್ಸ್ಟ್" ಕೂಡ ಅವ್ಯವಸ್ಥೆ ಬಗ್ಗೆ ವರದಿ ಪ್ರಕಟಿಸಿತ್ತು
ಈ ಹಿನ್ನೆಲೆಯಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಕಾರ್ಯಪ್ರವೃತ್ತರಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಜೆಸಿಬಿ ಮುಖಾಂತರ ಸೂಕ್ತ ಚರಂಡಿ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿದ್ದಾರೆ.
ಈ ಸಂದರ್ಭ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಸ್ವಚ್ಛತೆಗೆ ಪಂಚಾಯತ್ ಆದ್ಯತೆ ನೀಡಿದ್ದು. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
Kshetra Samachara
23/09/2021 07:46 pm