ಕೊಡವೂರು: ಉಡುಪಿ ವಿಧಾನಸಭೆ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕೊಡವೂರು ನಿವಾಸಿ ಮೋಕ್ಷಿತ್ ಎಂಬವರು ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸು ಮಾಡಿದ್ದರು.ಅದರಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿದ್ದು,ಇವತ್ತು ಉಡುಪಿ ಶಾಸಕ ರಘುಪತಿ ಭಟ್ ಮೃತರ ಮನೆಗೆ ಭೇಟಿ ನೀಡಿ ಪರಿಹಾರದ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್ ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕೇಯ ಉಪಸ್ಥಿತರಿದ್ದರು.
Kshetra Samachara
12/10/2021 06:32 pm