ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ :ಮಲ್ಪೆ ಬೀಚ್ ಸ್ವಚ್ಛತೆಯಲ್ಲಿ ಪಾಲ್ಗೊಂಡ ಶಾಸಕರು,ಜಿಲ್ಲಾಧಿಕಾರಿ

ಮಲ್ಪೆ: ನೆಹರು ಯುವ ಕೇಂದ್ರ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ, ಎನ್.ಎಸ್.ಎಸ್, ಎನ್.ಸಿ.ಸಿ ವಿಂಗ್ಸ್ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಯೂತ್ ಕ್ಲಬ್, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆ.ಸಿ.ಐ ಹಾಗೂ ಸ್ವಚ್ಛ ಭಾರತ್ ಫ್ರೆಂಡ್ಸ್, ಉಡುಪಿ ಇವರ ಆಶ್ರಯದಲ್ಲಿ ಇಂದು ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. "ಕ್ಲೀನ್ ಇಂಡಿಯಾ" ಕಾರ್ಯಕ್ರಮದ ಭಾಗವಾಗಿ ಇದು ನಡೆದಿದ್ದು ಶಾಸಕ ಕೆ ರಘುಪತಿ ಭಟ್ ಮತ್ತು ಉಡುಪಿ ಡಿಸಿ ಭಾಗವಹಿಸಿ ತಾವೂ ಕೂಡ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯೋಜನಾ ಅಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/10/2021 12:04 pm

Cinque Terre

9.87 K

Cinque Terre

0