ಸೈಬ್ರಕಟ್ಟೆ: ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ (ರಿ.), ಉಡುಪಿ ಇದರ ಬಿಲ್ಲಾಡಿ ಸೈಬ್ರಕಟ್ಟೆಯ ಆತ್ಮಾನಂದ ಸರಸ್ವತಿ ಐ.ಟಿ.ಐ. ನ ಎಂ.ಆರ್.ಎ.ಸಿ ವೃತ್ತಿ ಘಟಕದ ಇಂದು ಉದ್ಘಾಟನೆಗೊಂಡಿತು. ಶಾಸಕ ಕೆ ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.
ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚಿಸಿದರು. ಬೆಂಗಳೂರು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಶ್ರೀ ಕ್ಷೇತ್ರ ಮಂದಾರ್ತಿಯ ಆಡಳಿತ ಮೊಕ್ತೇಸರರಾದ ಧನಂಜಯ ಶೆಟ್ಟಿ, ಬೆಂಗಳೂರು ಬ್ರಹ್ಮಶ್ರೀ ನಾರಾಯಣಗುರು ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ, ಕಾರ್ಯಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಬನ್ನಂಜೆ ಬಾಬು ಅಮೀನ್, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ (ರಿ.) ನ ಶಕುಂತಳಾ ಶ್ರೀನಿವಾಸ್, ಪ್ರಾಂಶುಪಾಲರಾದ ರೂಪೇಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
Kshetra Samachara
23/10/2021 01:13 pm