ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ.8ರಂದು ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರದಾನ

ಉಡುಪಿ: ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರದಾನ ನವೆಂಬರ್ 8 ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ. ಶ್ರೀಗಳು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಮಹೋನ್ನತ ಪ್ರಶಸ್ತಿ ನೀಡಲಾಗುತ್ತಿದೆ.

ಶ್ರೀಗಳು ಕೃಷ್ಣೈಕ್ಯರಾದ ಬಳಿಕ 2020 ರಲ್ಲಿ ಪದ್ಮ ವಿಭೂಷಣ ಪುರಸ್ಕಾರ ಘೋಷಣೆಯಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇದೀಗ ಪ್ರಶಸ್ತಿ ಪ್ರದಾನ ಕುರಿತು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಆಹ್ವಾನ ತಲುಪಿದ್ದು, ನವೆಂಬರ್ 7 ರಂದು ವಿಶ್ವಪ್ರಸನ್ನ ತೀರ್ಥರು ದೆಹಲಿಗೆ ತೆರಳಿ ಗುರುಗಳ ಪರವಾಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/10/2021 04:39 pm

Cinque Terre

4.16 K

Cinque Terre

2