ಉಡುಪಿ:ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳಲ್ಲಿ ಈಗಾಗಲೇ 220 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಬ್ಯಾಂಕ್ ಆಫ್ ಬರೋಡದ ಚೀಫ್ ಬ್ರಾಂಚ್ ಮ್ಯಾನೇಜರ್ ಹಾಗೂ ಸ್ಲಂ ಬೋರ್ಡ್ ಅಧಿಕಾರಿಗಳೊಂದಿಗೆ ಇಂದು ಉಡುಪಿ ನಗರಸಭೆಯಲ್ಲಿ ಸಭೆ ನಡೆಸಿ ಸದರಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಬ್ಯಾಂಕ್ ಆಫ್ ಬರೋಡ ಚೀಫ್ ಬ್ರಾಂಚ್ ಮ್ಯಾನೇಜರ್ ಕಮಲೇಶ್, ಚೀಫ್ ಸೀನಿಯರ್ ಮ್ಯಾನೇಜರ್ ಹರೀಶ್ ನಾಯಕ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಟಿ. ಪ್ರಸನ್ನ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಪಾದ, ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಹಾಗೂ ಗುತ್ತಿಗೆದಾರರಾದ ನಿಹಾಲ್ ಭಟ್ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
Kshetra Samachara
27/10/2021 01:49 pm