ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಇನ್ನು ಮುಂದೆ ಆನ್ಲೈನ್ ಮೂಲಕ ಮನಪಾ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿ ಅನುಷ್ಠಾನ

ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇನ್ನು ಮುಂದೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಆನ್ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. ನಾಳೆಯಿಂದ ಈ ವ್ಯವಸ್ಥೆ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು.

ಮನಪಾ ಕಚೇರಿಯಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಆಸ್ತಿ ತೆರಿಗೆಯನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ವೆಬ್ ಅಪ್ಲಿಕೇಷನ್ ಅನ್ನು ಸಿದ್ಧಪಡಿಸಲಾಗಿದೆ‌. ಈ ವೆಬ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ತಾವು ಇರುವ ಸ್ಥಳದಲ್ಲಿಯೇ ಇದ್ದಕೊಂಡು ತಮ್ಮ ಆಸ್ತಿ ತೆರಿಗೆಯ ಮೊತ್ತವನ್ನು ಪಾವತಿಸಬಹುದು ಎಂದು ಹೇಳಿದರು.

ಪಾವತಿದಾರರು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಗೂಗಲ್ ಪೇ, ಫೋನ್ ಪೇ, ಬ್ಯಾಂಕ್ ಟ್ರಾನ್ಸ್‌ಫರ್ ಮೂಲಕ‌ ಪಾವತಿ ಮಾಡಬಹುದು. ಅಲ್ಲದೆ ಆಫ್ ಲೈನ್ ಮೂಲಕ‌ ಪಾವತಿ ಮಾಡಲು ಅವಕಾಶವಿದ್ದು, ಯಾವುದೇ ಬ್ಯಾಂಕ್ ನಿಂದ ಪಾವತಿ ಮಾಡಬಹುದು ಎಂದು ಪ್ರೇಮಾನಂದ ಶೆಟ್ಟಿ ಹೇಳಿದರು.

Edited By : Manjunath H D
Kshetra Samachara

Kshetra Samachara

01/11/2021 02:44 pm

Cinque Terre

6.69 K

Cinque Terre

0

ಸಂಬಂಧಿತ ಸುದ್ದಿ