ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ತಾಂತ್ರಿಕ ನಿರ್ದೇಶಕರಾದ ಬಿಳಿಗೇರಿ ರಂಗಸ್ವಾಮಿ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಟಿ. ಪ್ರಸನ್ನ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಪಾದ, ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.
Kshetra Samachara
02/11/2021 04:45 pm