ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಸಾರ್ವಜನಿಕ ರಸ್ತೆಗೆ ಖಾಸಗಿಯವರಿಂದ ತಡೆ: ಶಾಸಕ ರಘುಪತಿ ಭಟ್ ಮನವೊಲಿಕೆ

ಉಡುಪಿ:ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಮೂಲಸ್ಥಾನದಿಂದ ಇಂದಿರಾನಗರ ಸಂಪರ್ಕರಸ್ತೆ ಹಾದುಹೋಗುವಲ್ಲಿ ಖಾಸಗಿ ಜಾಗದವರಿಂದ ತಡೆ ಉಂಟಾಗಿದ್ದು, ಸ್ಥಳೀಯರ ಬೇಡಿಕೆಯಂತೆ ಇಂದು ಶಾಸಕ ಕೆ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಖಾಸಗಿ ಜಾಗದ ಮಾಲಕರೊಂದಿಗೆ ಸುದೀರ್ಘವಾಗಿ ಚರ್ಚಿಸಿ ಮನವೊಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಚಂದ್ರಶೇಖರ್ ಹಾಗೂ ಉಡುಪಿ ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಅಭಿಯಂತರರಾದ ದುರ್ಗಾ ಪ್ರಸಾದ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರಮೋದ್ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/11/2021 06:08 pm

Cinque Terre

1.21 K

Cinque Terre

0