ಉಡುಪಿ: ಶಾಸಕ ರಘುಪತಿ ಭಟ್ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಭಾಗದಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಆರ್ಥಿಕವಾಗಿ ಹಿಂದುಳಿದವರ ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಸೇವೆಯನ್ನು ನಡೆಸುತ್ತಿದೆ.ಈವರೆಗೆ ಸುಮಾರು 100 ಮನೆಗಳಿಗೆ ಟ್ರಸ್ಟ್ ವತಿಯಿಂದ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. 100ನೇ ಮನೆಯ ವಿದ್ಯುತ್ ಸಂಪರ್ಕವನ್ನು ಇಂದು ಇಂದ್ರಾಳಿ ಮಂಚಿ ಕುಮೇರಿಯ ಮನೆಯಲ್ಲಿ ದಾನಿಗಳಾದ ಎಂ.ಐ.ಟಿ ಮಣಿಪಾಲದ ಪ್ರೊಫೆಸರ್ ಡಾll. ನಾರಾಯಣ್ ಶೆಣೈ ಉದ್ಘಾಟಿಸಿದರು. ಶಾಸಕ ಕೆ. ರಘುಪತಿ ಭಟ್ ಜೊತೆಗಿದ್ದರು.
ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ.) ಇದರ ಸೇವಾ ಪ್ರಕಲ್ಪದ ಅಂಗವಾಗಿ ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ನಗರ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಆರ್ಥಿಕವಾಗಿ ಹಿಂದುಳಿದವರ ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಸೇವೆಯನ್ನು ನಡೆಸುತ್ತಿದೆ. ಉಡುಪಿ ಪುತ್ತೂರು, ಕೊಡವೂರು, ಇಂದ್ರಾಳಿ ಮಂಚಿ ಕುಮೇರಿ ಭಾಗದಲ್ಲಿ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ 6 ಮನೆಗಳಿಗೆ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನಿಂದ ಉಚಿತ ವಿದ್ಯುತ್ ಸಂಪರ್ಕ ನೀಡುವುದರ ಮುಖೇನ ಈವರೆಗೆ 100 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಮೆಸ್ಕಾಂ ಇಲಾಖೆ ಉಡುಪಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಣ್ ರಾಜ್ ಭಟ್, ಮೆಸ್ಕಾಂ ಇಲಾಖೆ ಮಣಿಪಾಲದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಪುತ್ರನ್, ಆಸರೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಪ. ವಸಂತ ಭಟ್, ಆಸರೆ ಚಾರಿಟೇಬಲ್ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಮತ್ತು ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.
Kshetra Samachara
03/11/2021 08:28 pm