ಬಜಪೆ:ಮಂಗಳೂರು ನಗರ ಉತ್ತರ ಮಂಡಲದ ಶಕ್ತಿ ಕೇಂದ್ರ ಪ್ರಮುಖರ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಕಾರ್ಯಗಾರವು ಗುರುಪುರದಲ್ಲಿ ನಡೆಯಿತು.ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸುವ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಬೆಳ್ತಂಗಡಿ , ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಅಜಿತ್ ಕುಮಾರ್ ಉಳ್ಳಾಲ್, ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹಾಗೂ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸೋಹನ್ ಅತಿಕಾರಿ,ಮಂಡಲ ಸಾಮಾಜಿಕ ಜಾಲ ತಾಣ ಸಂಚಾಲಕರಾದ ಶ್ರವಣ್ ಶೆಟ್ಟಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
08/11/2021 04:13 pm