ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೊಳ್ಳಿ: "ಕಾನೂನಿನ ಅರಿವಿದ್ದರೆ ವ್ಯಕ್ತಿತ್ವಕ್ಕೆ ಮೆರುಗು"

ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ, "ಕಾನೂನಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿ ನಾಗರಿಕರಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ ಮುಕ್ತ ಸಮಾಜದ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು" ಎಂದರು.

ಕಾಲೇಜಿನ ಪ್ರಿನ್ಸಿಪಾಲ್ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಯು.ವೆಂಕಟೇಶ ಮೂರ್ತಿ, ನರೇಂದ್ರ ಎಸ್. ಗಂಗೊಳ್ಳಿ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Edited By : Nirmala Aralikatti
Kshetra Samachara

Kshetra Samachara

13/11/2021 09:33 am

Cinque Terre

5.73 K

Cinque Terre

0

ಸಂಬಂಧಿತ ಸುದ್ದಿ