ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಾರ್ನಾಡು ಗಾಂಧಿ ಮೈದಾನದ ಬಳಿ ಹೆದ್ದಾರಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಅವ್ಯವಸ್ಥೆಗಳ ಆಗರವಾಗಿದೆ.
ಸದಾ ಜನನಿಬಿಡ ಪ್ರದೇಶವಾಗಿರುವ ಕಾರ್ನಾಡು ಗಾಂಧಿ ಮೈದಾನದ ಬಳಿ ಮೀನು ಮಾರುಕಟ್ಟೆ ಹಾಗೂ ರಿಕ್ಷಾ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ನೀರು ನಿಲ್ಲುತ್ತಿದ್ದು ವಾಹನ ಸಂಚಾರ ದುಸ್ತರವಾಗಿದೆ.
ರಸ್ತೆಯಲ್ಲಿ ನೀರು ನಿಂತು ಗಲೀಜು ಮಯ ವಾತಾವರಣ ಸೃಷ್ಟಿಯಾಗಿದ್ದು ನಡೆದಾಡಲು ತ್ರಾಸದಾಯಕವಾಗಿ ಪರಿಣಮಿಸಿದೆ
ಇದೇ ಪರಿಸರದಲ್ಲಿರುವ ಅವೆನ್ಯೂ ಬಹುಮಹಡಿ ಕಟ್ಟಡದ ಕಸದ ತ್ಯಾಜ್ಯವನ್ನು ಹೆದ್ದಾರಿ ರಸ್ತೆ ಬದಿಯಲ್ಲಿ ರಾಶಿ ಹಾಕುತ್ತಿದ್ದು ರೋಗಗಳ ಭೀತಿ ಎದುರಾಗಿದೆ.
ಬಹುಮಹಡಿ ಕಟ್ಟಡದ ತ್ಯಾಜ್ಯನೀರನ್ನು ಸಮೀಪದ ತೋಟಗಳಿಗೆ ರಾತ್ರಿಹೊತ್ತು ಬಿಡುತ್ತಿದ್ದು. ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ಬೆಳೆ ಹಾನಿ ಸಂಭವಿಸಿದೆ.
ರಸ್ತೆ ಒಳಚರಂಡಿ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಹೆದ್ದಾರಿ ಇಲಾಖೆ ಹಾಗೂ ಮುಲ್ಕಿ ನಗರ ಪಂಚಾಯತ್ ಗೆ ದೂರು ನೀಡಿದರೂ ಇದುವರೆಗೂ ಸೂಕ್ತ ವ್ಯವಸ್ಥೆ ಮಾಡಿಲ್ಲ.
ಕೂಡಲೇ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
22/11/2021 03:13 pm