ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪರ್ಯಾಯ ಮೂಲ ಸೌಕರ್ಯ ಕಾಮಗಾರಿ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ

ಉಡುಪಿ: 2022ನೇ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಮಹೋತ್ಸವ ನಡೆಯಲಿದೆ. ಲಕ್ಷಾಂತರ ಮಂದಿ ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವುದರಿಂದ ಉಡುಪಿ ನಗರಸಭೆ ಅನುದಾನದಲ್ಲಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಿದೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿರುವುದರಿಂದ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಟೆಂಡರ್ ಕರೆದು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಆದರೆ 2022ನೇ ಜನವರಿ 18ರಿಂದ ಉಡುಪಿ ಪರ್ಯಾಯ ನಡೆಯಲಿರುವುದರಿಂದ ಉಡುಪಿ ನಗರದ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ನಗರಸಭೆ ವತಿಯಿಂದ ತಕ್ಷಣದಲ್ಲಿ ಟೆಂಡರ್ ಕರೆದು ಕೈಗೆತ್ತಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮತಿ ನೀಡುವಂತೆ ನಗರಸಭೆ ವತಿಯಿಂದ ಜಿಲ್ಲಾಧಿಕಾರಿಯವರ ಮೂಲಕ ಚುನಾವಣಾ ಆಯೋಗದ ಅನುಮತಿ ಕೋರಲಾಗಿತ್ತು.

Edited By : PublicNext Desk
Kshetra Samachara

Kshetra Samachara

26/11/2021 11:19 am

Cinque Terre

10.88 K

Cinque Terre

1

ಸಂಬಂಧಿತ ಸುದ್ದಿ