ಉಡುಪಿ: ರಾಷ್ಟ್ರೀಯ ಗ್ರಾಮೀಣ ಯೋಜನೆಯಡಿ (ಎನ್ .ಆರ್ .ಎಲ್ .ಎಂ ) ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ರುಡ್ಸೆಟ್ ಸಂಸ್ಥೆ ಆಶ್ರಯದಲ್ಲಿ ಗ್ರಾಮೀಣ ಪ್ರದೇಶದ ಸ್ವ ಸಹಾಯ ಸಂಘಗಳ ಮಹಿಳೆಯರಿಗಾಗಿ ಇಂದು ಲಘು ವಾಹನ ತರಬೇತಿಗೆ ಚಾಲನೆ ನೀಡಲಾಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ .ನವೀನ್ ಭಟ್ ಚಾಲನೆ ನೀಡಿ, ಉಡುಪಿ ಜಿಲ್ಲೆಯಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಜೀವಿನಿ ಸಂಘದ ಮಹಿಳೆಯರು ಆಸಕ್ತಿ ತೋರಿಸಿರವುದು ಪ್ರಶಂಸನೀಯ.ರಾಜ್ಯದಲ್ಲಿಯೇ ಗುರುತಿಸುವ ಮಟ್ಟಿಗೆ ಉಡುಪಿ ಜಿಲ್ಲೆಯ ಗ್ರಾಮೀಣ ಮಹಿಳೆಯರು ಮುಂದೆ ಬರುತ್ತಿದ್ದಾರೆ.
ತರಬೇತಿಯ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ವಾಹನದ ಚಾಲಕರಾಗಲು ಆಸಕ್ತಿ ಇರುವವರು ಒಟ್ಟು 65 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಬಾಬು ಎಂ .ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ ,ಎನ್ .ಆರ್ .ಎಲ್ .ಎಂ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ,ಜಿಲ್ಲಾ ವ್ಯವಸ್ಥಾಪಕಿ ನವ್ಯಾ ,ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕರುಣಾಕರ ಜೈನ್ ,ಉಪನ್ಯಾಸಕ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
29/11/2021 08:19 pm