ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿಯಲ್ಲಿ ದಾರಿದೀಪದ ಅವ್ಯವಸ್ಥೆ ಕಾಡುತ್ತಿದ್ದು, ಹೆದ್ದಾರಿ ಸಂಚಾರ ದುಸ್ತರವಾಗಿದೆ.
ಮುಲ್ಕಿ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಅವ್ಯವಸ್ಥೆಗಳ ಆಗರವಾಗಿದ್ದು ಸರ್ವಿಸ್ ರಸ್ತೆ ಅರ್ಧಂಬರ್ಧ ಕಾಮಗಾರಿಯಿಂದ ಹೆದ್ದಾರಿ ಸಂಚಾರಕ್ಕೆ ಮೊದಲೇ ತೊಂದರೆಯಾಗಿದ್ದು, ಈ ನಡುವೆ ಹೆದ್ದಾರಿಯಲ್ಲಿ ದಾರಿದೀಪದ ಅವ್ಯವಸ್ಥೆಯಿಂದ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಮತ್ತಷ್ಟು ತೊಂದರೆಯಾಗಿದೆ.
ಹೆದ್ದಾರಿ ದಾರಿದೀಪದ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಹೆದ್ದಾರಿ ಇಲಾಖೆಗೆ ದೂರು ನೀಡಿದ್ದರೂ ಇದುವರೆಗೂ ಸರಿಪಡಿಸಿಲ್ಲ.
ಮುಲ್ಕಿ ಹೆದ್ದಾರಿ ಅವ್ಯವಸ್ಥೆಗಳ ಆಗರವಾಗಿದ್ದು, ಅರ್ಧಂಬರ್ಧ ಕಾಮಗಾರಿ ನಡೆದಿದ್ದರೂ ಹೆದ್ದಾರಿ ಇಲಾಖೆಯಿಂದ ಅಕ್ರಮವಾಗಿ ಟೋಲ್ ವಸೂಲಿ ನಿರಂತರ ನಡೆಯುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಹೆದ್ದಾರಿ ಇಲಾಖೆ ಮುಲ್ಕಿ, ಹಳೆಯಂಗಡಿ ಜಂಕ್ಷನ್ ದಾರಿದೀಪ ಸರಿಪಡಿಸಬೇಕು ಹಾಗೂ ಸರ್ವಿಸ್ ರಸ್ತೆ ಕಾಮಗಾರಿ ನಡೆಸಬೇಕು ಇಲ್ಲದಿದ್ದರೆ, ಹೆದ್ದಾರಿ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದವರು ಎಚ್ಚರಿಕೆ ನೀಡಿದ್ದಾರೆ.
Kshetra Samachara
01/12/2021 07:40 pm