ಪುತ್ತೂರು: ರಾಜ್ಯ ಸರಕಾರವು ಕೆ.ಎಸ್.ಆರ್.ಟಿ.ಸಿ. ನೌಕರರ ಎಲ್ಲ ಪ್ರಮುಖ ಬೇಡಿಕೆಗಳನ್ನು ಈಡೇರಿಸಿದ ಹಿನ್ನೆಲೆಯಲ್ಲಿ ಈ ಹಿಂದೆ ನಿರ್ಧರಿಸಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಬಿಎಂಎಸ್ ಪುತ್ತೂರು ಘಟಕದ ಅಧ್ಯಕ್ಷ ಗಿರೀಶ್ ಎಂ. ತಿಳಿಸಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಬಳಿಕ ಅರ್ಧ ಸಂಬಳ ನೀಡುತ್ತಿದ್ದ ಕೇಂದ್ರ ಕಚೇರಿಯ ಅಧಿಕಾರಿಗಳು, ಪೂರ್ಣ ಸಂಬಳ ನೀಡುವ ಭರವಸೆಯ ಜೊತೆಗೆ ನಿವೃತ್ತಿ ಹೊಂದಿದವರ ಗ್ರಾಜ್ಯುಟಿಯನ್ನೂ ನೀಡಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಮತ್ತೆ ಸರಕಾರ, ಸಿಬ್ಬಂದಿಗೆ ತೊಂದರೆ ನೀಡಿದಲ್ಲಿ ಮತ್ತೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
Kshetra Samachara
14/12/2021 12:43 pm