ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮತ್ಸ್ಯಗಂಧ ಎಕ್ಸ್ ಪ್ರೆಸ್ ರೈಲಿನ ಅವಧಿ ವಿಸ್ತರಣೆ

ಉಡುಪಿ: ಮುಂದಿನ ಜ.31ರವರೆಗೆ ನಿಗದಿಯಾಗಿದ್ದ ಮಂಗಳೂರು ಸೆಂಟ್ರಲ್ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಮತ್ಸಗಂಧ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ಮುಂದಿನ ಪ್ರಕಟಣೆಯವರೆಗೆ ವಿಸ್ತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಅದೇ ರೀತಿ ವಾರಕ್ಕೆ ಎರಡು ದಿನ ಸಂಚರಿಸುವ ಎರ್ನಾಕುಲಂ- ಓಕಾ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನೂ ಸಹ ಮುಂದಿನ ಪ್ರಕಟಣೆಯವರೆಗೆ ಮುಂದುವರಿಸಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.

ವಾರದಲ್ಲಿ ಮೂರು ದಿನ ಸಂಚರಿಸುವ ಎಚ್. ನಿಝಾಮುದ್ದೀನ್-ತಿರುವನಂತಪುರಂ ಸೆಂಟ್ರಲ್- ಎಚ್.ನಿಝಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಎರಡು ತ್ರಿಟಯರ್ ಎಸಿ ಕೋಚ್‌ನ್ನು ಶಾಶ್ವತವಾಗಿ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ ರೈಲು ಒಟ್ಟು 20 ಬೋಗಿಗಳೊಂದಿಗೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Edited By :
Kshetra Samachara

Kshetra Samachara

04/01/2022 09:12 pm

Cinque Terre

16.11 K

Cinque Terre

0