ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಪಟ್ಟಣ ಪಂಚಾಯತ್ ವಿಟ್ಲ, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಬುಧವಾರ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣೆ ಕಾರ್ಯಕ್ರಮವನ್ನು ಮೇದಿನಿ ಜನ ಸೇವಾ ಕೇಂದ್ರ ಪುತ್ತೂರು , ಇವರ ಸಹಕಾರದೊಂದಿಗೆ ನಡೆಯಿತು.
ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷ ಬಿ ಸಂದೇಶ ಶೆಟ್ಟಿ ವಹಿಸಿದ್ದರು. ಲಯನ್ಸ್ ಪ್ರಾಂತೀಯ ಸಲಹೆಗಾರ ಲಯನ್ ಸುದರ್ಶನ್ ಪಡಿಯಾರ್, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ನಿರ್ಮಲ, ಮತ್ತು ಕವಿತಾ, ಲಯನ್ ಸದಸ್ಯರಾದ ಸುರೇಶ್ ಬನಾರಿ, ಉಪಾಧ್ಯಕ್ಷರಾದ ವಸಂತ್ ಶೆಟ್ಟಿ, ಸದಸ್ಯರಾದ ದಿನಕರ ಆಳ್ವ, ಮುಂತಾದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸುಮಾರು 75 ಜನರಿಗೆ ಆಯುಷ್ಮಾನ್ ಕಾರ್ಡನ್ನು ವಿತರಿಸಲಾಯಿತು.
Kshetra Samachara
12/01/2022 06:02 pm