ಮುಲ್ಕಿ:ಯಕ್ಷಗಾನ ತಾಳಮದ್ದಳೆಯಲ್ಲಿ ಪುರಾಣ ಪ್ರಸಂಗಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆ ಹಾಗೂ ಧರ್ಮದ ಜಾಗೃತಿ ಮೂಡಿಸಲು ಸಾಧ್ಯ ಎಂದು ಕರ್ಣಾಟಕ ಬ್ಯಾಂಕ್ ಮಹಾ ಪ್ರಬಂಧಕ ಚಂದ್ರಶೇಖರ ರಾವ್ ಬಿ. ಹೇಳಿದರು.
ಕಿನ್ನಿಗೋಳಿಯ ಯಕ್ಷಲಹರಿ ಮತ್ತು ಯುಗಪುರುಷದ ಸಂಯುಕ್ತ ಆಶ್ರಯದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಮಕರ ಸಂಕ್ರಾತಿ ಪ್ರಯುಕ್ತ ಶುಕ್ರವಾರ ನಡೆದ ತಾಳಮದ್ದಲೆ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಟೀಲು ದೇವಸ್ಥಾನದ ಅರ್ಚಕ ವೇದಮೂರ್ತಿ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶಿರ್ವಚನ ನೀಡಿದರು.ಕಸಾಪದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಶುಭಾ ಶಂಸನೆಗೈದರು.
ಕಾರ್ಯಕ್ರಮದಲ್ಲಿ ಯಕ್ಷಕವಿ ಕಲಾವಿದ ಬೆಳ್ಳಾರೆ ಮಂಜುನಾಥ ಭಟ್ ಅವರನ್ನು ಕವಿ- ಕಲಾವಿದ ನೆಲೆಯಲ್ಲಿ ಗೌರವಿಸಲಾಯಿತು. ಮೂಡಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಸ್ವರಾಜ್ ಶೆಟ್ಟಿ , ಸೇರಿದಂತೆ ಮುಂತಾದವರು.
Kshetra Samachara
15/01/2022 11:37 am