ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜನವರಿ 28 ರಂದು ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ.
ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮುಂಬಯಿಯ ಆರ್ಗನಿಕ್ ಕೆಮಿಕಲ್ಸ್ ಸಂಸ್ಥೆಯ ಸಿಎಂಡಿ, ಒಕ್ಕೂಟದ ನಿರ್ದೇಶಕ ಆನಂದ ಎಂ. ಶೆಟ್ಟಿ ಚೆಕ್ ಗಳನ್ನು ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ, ಉದ್ಯಮಿ ಮುಂಬಯಿ ಶಶಿಧರ ಶೆಟ್ಟಿ ಇನ್ನಂಜೆ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ಕದ್ರಿ ನವನೀತ ಶೆಟ್ಟಿ, ಪ್ರೊಫೆಸರ್ ಭಾಸ್ಕರ ರೈ ಕುಕ್ಕುವಳ್ಳಿ, ಪತ್ರಕರ್ತರಾದ ಬಿ ರವೀಂದ್ರ ಶೆಟ್ಟಿ, ಪ್ರದೀಪ್ ಕುಮಾರ್ ರೈ ಐಕಳ ಬಾವ, ಶಿಕ್ಷಕರಾದ ಸಾಯಿನಾಥ ಶೆಟ್ಟಿ ಮುಂಡ್ಕೂರು, ಪಿಎಚ್ ಡಿ ಪದವಿ ಪಡೆದ ಡಾ. ಸುಧಾರಾಣಿ, ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.
ಅದೇ ರೀತಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಬೊಲ್ಯೊಟ್ಟು ಶಶಿಧರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬೆಳ್ಳಂಪಳ್ಳಿ ಬಂಟರ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಅವರನ್ನು ಗೌರವಿಸಲಾಗುವುದು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು.
Kshetra Samachara
24/01/2022 10:10 pm