ಮುಲ್ಕಿ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ವಿವಾದಕ್ಕೆ ಸಂಬಂಧ ಪಟ್ಟಂತೆ ಕುದ್ರೋಳಿ ಕ್ಷೇತ್ರದ ನಿರ್ದೇಶನದಂತೆ ಸಮಾಜ ಬಾಂಧವರಿಂದ ಭಜನಾ ಕಾರ್ಯಕ್ರಮ ಜರಗಿತು. ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುವ ನಿಟ್ಟಿನಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ದೊರೆಯುವ ನಿಟ್ಟಿನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಸಂಘದ ಅಧ್ಯಕ್ಷ ರಮೇಶ್ ಕೆ ಅಮೀನ್,ಮಾಜಿ ಅಧ್ಯಕ್ಷರುಗಳು,ಪದಾಽಕಾರಿಗಳು,ಸಮಾಜ ಬಾಂಧವರು ಉಪಸ್ಥಿತರಿದ್ದರು.
Kshetra Samachara
26/01/2022 10:51 pm