ಮುಲ್ಕಿ: ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ ಎಸ್ ಕೊಡಿ - ತೋಕೂರು ನೂತನ ಅಂಗನವಾಡಿ ಬಳಿ ಕಸದ ತ್ಯಾಜ್ಯ ರಾಶಿ ಬಿದ್ದುಕೊಂಡಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್ ಆರೋಪಿಸಿದ್ದಾರೆ
ಪಡುಪಣಂಬೂರು ಗ್ರಾಪಂ ವ್ಯಾಪ್ತಿಯ ಎಸ್ ಕೊಡಿ ತೋಕೂರು ಅಂಗನವಾಡಿ ಪರಿಸರದ ಪ್ರಧಾನ ರಸ್ತೆ ಬದಿಯಲ್ಲಿ ಕೂಡ ಎಲ್ಲೆಂದರಲ್ಲಿ ತ್ಯಾಜ್ಯ ಹರಡಿಕೊಂಡಿದ್ದು ಸ್ವಚ್ಛ ಗ್ರಾಮಕ್ಕೆ ನಾಗರಿಕರು ಕ್ಯಾರೇ ಅನ್ನುತ್ತಿಲ್ಲ. ಈ ಬಗ್ಗೆ ಪಂಚಾಯತ್ ಕೊಡ ಮೌನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿ ಪಂಚಾಯತ್ ಸಭೆಯಲ್ಲಿ ಸ್ವಚ್ಚ ಗ್ರಾಮದ ಬಗ್ಗೆ ಮಾತನಾಡುತ್ತಿರುವ ಪಂಚಾಯತ್ ಅಧ್ಯಕ್ಷರು ಸ್ಥಳೀಯ ಸದಸ್ಯರು ತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯದಿಂದ ಪರಿಸರದಲ್ಲಿ ರೋಗದ ಭೀತಿ ಎದುರಾಗಿದೆ.
ಕೂಡಲೇ ಜಿಲ್ಲಾಡಳಿತ ಪಡುಪಣಂಬೂರು ಪಂಚಾಯಿತಿಗೆ ನಿರ್ದೇಶನ ನೀಡಿ ತ್ಯಾಜ್ಯ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Kshetra Samachara
29/01/2022 07:47 pm