ಮಂಗಳೂರು: ನಗರದ ಸ್ಮಾರ್ಟ್ ಸಿಟಿ ಕಾಮಗಾರಿಯು ವಿಳಂಬವಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ಸಂಪೂರ್ಣ ಕಾಮಗಾರಿಯನ್ನು 2023 ಮಾರ್ಚ್ ಒಳಗೆ ಪೂರ್ಣ ಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರಿಗೆ ಆಗಮಿಸಿರುವ ಅವರು ನಗರದಲ್ಲಿ ಸ್ಮಾರ್ಟ್ ಸಿಟಿ ವಿವಿಧ ಕಾಮಗಾರಿಯನ್ನು ವೀಕ್ಷಿಸಿ ಬಳಿಕ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗೆ ವೇಗ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಒಂದು ತಿಂಗಳ ಬಳಿಕ ಮತ್ತೆ ಪರಿಶೀಲನೆ ನಡೆಸಲು ನಗರಕ್ಕೆ ಮತ್ತೆ ಬರುತ್ತೇನೆ. ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಸಮರ್ಪಕವಾಗಿ ಪೂರೈಸಿ ಅವಧಿಯೊಳಗೆ ಮಾಡಿ ಮುಗಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸಾರ್ವಜನಿಕರು ಕಾಮಗಾರಿಗಳ ಗುಣಮಟ್ಟದ ಬಗ್ಗೆ ದೂರು ನೀಡದಿದ್ದಲ್ಲಿ ಪರಿಶೀಲನೆ ನಡೆಸಿ ಸರಿಪಡಿಸುವ ಕೆಲಸ ಮಾಡುತ್ತೇವೆ. ಗುಣಮಟ್ಟದ ಪರಿಶೀಲನಾ ತಂಡವು ಕಾಮಗಾರಿಯ ಗುಣಮಟ್ಟದ ಬಗ್ಗೆ ಅಂತಿಮ ವರದಿ ಸಲ್ಲಿಸುತ್ತದೆ. ಅದರ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕಾಮಗಾರಿಯಲ್ಲಿ ಲೋಪ ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭೈರತಿ ಬಸವರಾಜ್ ಹೇಳಿದರು.
Kshetra Samachara
01/02/2022 05:56 pm