ಪಬ್ಲಿಕ್ ನೆಕ್ಸ್ಟ್ ವರದಿ ಫಲಶ್ರುತಿ
ಮುಲ್ಕಿ: ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಂಜಿನಡ್ಕ ಶಿಮಂತೂರು ದೇವಸ್ಥಾನದ ಸಂಪರ್ಕರಸ್ತೆಯ ಸ್ವಲ್ಪಭಾಗ ನಾದುರಸ್ಥಿಯಲ್ಲಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು.
ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಪಂಜಿನಡ್ಕ ಮೊಲೊಟ್ಟು ಕಡೆಯಿಂದ ಶಿಮಂತೂರು ದೇವಸ್ಥಾನದ ಮೂಲಕ ಮುಲ್ಕಿ, ಮಂಗಳೂರು ಕಡೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಅನೇಕ ವಾಹನಗಳು ಸಂಚರಿಸುತ್ತಿದ್ದು ರಸ್ತೆ ಅವ್ಯವಸ್ಥೆಯಿಂದ ಪ್ರಯಾಣ ತ್ರಾಸದಾಯಕವಾಗಿತ್ತು.
ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಕಟವಾಗುತ್ತಲೇ ಕಾರ್ಯಪ್ರವೃತ್ತರಾದ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ರಸ್ತೆಗೆ ಕಾರ್ಯಕಲ್ಪ ನೀಡಿದ್ದಾರೆ
ಸುಮಾರು 3 ಲಕ್ಷ ವೆಚ್ಚದಲ್ಲಿ ಉದ್ಯೋಗ ಖಾತರಿ ಯೋಜನೆಯ ಮೂಲಕ
ಕಾಂಕ್ರೀಟಿಕರಣ ನಡೆದಿದೆ ಎಂದು ಮಾಜಿ ಗ್ರಾಪಂ ಸದಸ್ಯ ಹಾಗೂ ಗ್ರಾಮಸ್ಥ ಹರೀಶ್ ಶೆಟ್ಟಿ ಹೇಳಿದ್ದಾರೆ.
ಅವ್ಯವಸ್ಥೆ ಬಗ್ಗೆ ಗಮನಹರಿಸಿದ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೂ ಧನ್ಯವಾದ ಹೇಳಿದ್ದಾರೆ.
Kshetra Samachara
06/02/2022 12:03 pm